Home » Kannada News » ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಜು. 16ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಂಭವ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಜು. 16ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಂಭವ

ಹೈಲೈಟ್ಸ್‌:

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆ, ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.16ರವರೆಗೆ ವ್ಯಾಪಕ ಮಳೆ ಸಾಧ್ಯತೆ
  • ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್‌ ಆಲರ್ಟ್‌
  • ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್‌, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಬಾಗಲಕೋಟೆಯ ಕೆಲವು ಕಡೆಯೂ ಭಾರಿ ಮಳೆ ಸುರಿಯುವ ಸಾಧ್ಯತೆ
  • ಈ ಜಿಲ್ಲೆಗಳಿಗೆ ಜು.13ರಂದು ಆರೆಂಜ್‌ ಹಾಗೂ ಜು.14 ಮತ್ತು 15ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದ ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳ ಕೊಲ್ಲಿಯ ಪಶ್ಚಿಮದ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.16ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು,ಆರೆಂಜ್‌ ಆಲರ್ಟ್‌ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್‌, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಬಾಗಲಕೋಟೆಯ ಕೆಲವು ಕಡೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ಜು.13ರಂದು ಆರೆಂಜ್‌ ಹಾಗೂ ಜು.14 ಮತ್ತು 15ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, 7 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಮತ್ತು ಭಟ್ಕಳದಲ್ಲಿ 12 ಸೆಂ.ಮೀ., ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 12 ಸೆಂ.ಮೀ. ಹಾಗೂ ಕೋಟಾದಲ್ಲಿ 10 ಸೆಂ.ಮೀ. ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.


Source link

x

Check Also

Nithya Bhavishya: ಈ ಎರಡು ರಾಶಿಯವರಿಗಿಂದು ಅದೃಷ್ಟದ ದಿನ..! ನಿಮ್ಮ ದಿನ ಹೇಗಿದೆ..?

2021 ಜುಲೈ 24 ರ ಶನಿವಾರವಾದ ಇಂದು, ಶನಿಯೊಂದಿಗೆ ಶನಿಯ ಗ್ರಹವಾದ ಮಕರ ರಾಶಿಯಲ್ಲಿ ಚಂದ್ರನು ಇರುತ್ತಾನೆ. ಶನಿ ಮತ್ತು ...